Breaking News

ಯತ್ನಾಳ್ ಕುರಿತು ಬೆಲ್ಲದ ಹೇಳಿಕೆ ಒಪ್ಪುವುದಿಲ್ಲ : ಅರುಣ್ ಸಿಂಗ್


ಹುಬ್ಬಳ್ಳಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ನಾಯಕನಲ್ಲ.ಇನ್ನೂ, ಮುಸ್ಲಿಮರ ಮೀಸಲಾತಿ ಕುರಿತು ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ಒಪ್ಪುವುದಿಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಲ್ಲ. ಅವರ ಸ್ವಭಾವವೇ ಹಾಗೇ. ಅವರ ಹೇಳಿಕೆಗಳಿಗೆ ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ. ಇನ್ನೂ, ಶಾಸಕ ಅರವಿಂದ ಬೆಲ್ಲದ ಮುಸ್ಲಿಮ್ ಸಮುದಾಯಕ್ಕೆ ಮೀಸಲಾತಿ ತೆಗೆದು ಹಾಕಬೇಕೆಂಬ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ ಎಂದು ಹೇಳಿದರು.

ಈಗಾಗಲೇ ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ ನಡೆದಿದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅದೇ ರೀತಿ ಕರ್ನಾಟಕದಲ್ಲಿ ಸಹ ಬಿಜೆಪಿ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯ ಸಾಧಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *