ಹಾವೇರಿ : ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ. ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು.
ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿತ್ತು. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ ಮುಂದೆ ಕುಟುಂಬಸ್ಥರು ಕುಳಿತು ಆಕ್ರಂದಿಸುತ್ತಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

