Breaking News

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ : ಓರ್ವ ಸಾವು

ಹುಬ್ಬಳ್ಳಿ: ನಗರದ ಹೊರವಲಯದ ಗಬ್ಬೂರು ಬಳಿಯ ರಿಂಗ್ ರೋಡ್ ಪಕ್ಕದ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಘಟನೆಯಲ್ಲಿ ಸುಮಾರು 25 ರಿಂದ 30 ವರ್ಷದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ, ಮೃತದೇಹದ ಮೇಲೆ ಬಾರಿ ಗಾತ್ರದ ವಾಹನ ಹಾದು ಹೋದ ಪರಿಣಾಮ ಮುಖವು ಛಿದ್ರ ಛಿದ್ರವಾಗಿದ್ದು ವ್ಯಕ್ತಿಯ ಗುರುತು ಪತ್ತೆ ಮಾಡಲು ಆಗದಂತಾಗಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *