Breaking News

ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ


ಬೆಂಗಳೂರು: ಕಳೆದ ವರ್ಷದ ಫೈಲ್ ಅನ್ನೇ ಕಾಪಿ ಪೇಸ್ಟ್ ಮಾಡಿಕೊಂಡು ಬಂದಿದ್ದ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಕೆಲ ಅಧಿಕಾರಿಗಳು ಹಳೇ ಅಂಕಿಅಂಶವನ್ನು ಕಾಪಿ ಪೇಸ್ಟ್ ಮಾಡಿ ಬಂದಿದ್ದರು. ಇದರಿಂದ ಸಿಟ್ಟಾದ ಸಿಎಂ ಬೊಮ್ಮಾಯಿ‌ ಹಾಗೂ ಸಚಿವ ಮಾಧುಸ್ವಾಮಿ ಅವರು ಸಿಇಒಗಳಿಗೆ ಸಭೆಯಲ್ಲೇ ಚಳಿ ಬಿಡಿಸಿದರು. ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳ ಸಿಇಒಗಳಿಗೆ ಸಿಎಂ ಮತ್ತು ಕಾನೂನು ಸಚಿವರು ಕ್ಲಾಸ್ ತೆಗೆದುಕೊಂಡರು. ರಸ್ತೆ, ಒಳ ಚರಂಡಿ, ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ಹಿಂದೆ ಉಳಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *