ಬೆಂಗಳೂರು: ದೇವನಹಳ್ಳಿ ಬಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ವ್ಯವಸ್ಥೆಗಳು, ಕಾರ್ಯಕ್ರಮ ಆಯೋಜನೆಗೆ ಬೇಕಾದ ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ.
ನವೆಂಬರ್ 10ರಂದು ವಿಮಾನ ನಿಲ್ದಾಣದ ಆವರಣದಲ್ಲಿ ಪ್ರತಿಮೆಯ ಸಮೀಪವೇ ಇರುವ 25-30 ಎಕರೆ ಖಾಲಿ ಜಾಗದಲ್ಲಿ ಬೃಹತ್ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡು ಉದ್ಘಾಟಿಸಲಿದ್ದಾರೆ. ಈ ಸಂಬಂಧ ಐಟಿ, ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
ಪ್ರಧಾನಿಗಳು ಆಗಮಿಸುವುದರಿಂದ ಕಾರ್ಯಕ್ರಮಕ್ಕೆ ಸಹಸ್ರ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ. ಸೂಕ್ತ ಬಂದೋಬಸ್ತ್ ಮತ್ತು ವಾಹನ ನಿಲುಗಡೆ ಸೇರಿದಂತೆ ಸಕಲ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಯಾವುದ್ದಕ್ಕೂ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಸರ್ಕಾರ ಸೂಚಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

