Breaking News

ಕಾಂತಾರ ಸಿನಿಮಾ ಕುರಿತು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮೆಚ್ಚುಗೆ ಮಾತು


ಕಾಂತಾರ ಸಿನಿಮಾ ಭಾರತದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕಾಂತಾರ ಸಿನಿಮಾ  ವೀಕ್ಷಿಸಿದ ಬಳಿಕ ದಕ್ಷಿಣ ಭಾರತದ ಸ್ಟಾರ್‌ ನಟರು ಸೋಷಿಯಲ್‌ ಮೀಡಿಯಾ ಮೂಲಕ ಹಾಡಿ ಹೊಗಳಿದ್ದಾರೆ. ಈ ಸಾಲಿಗೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ.

ಅಕ್ಟೋಬರ್‌ 16ರಂದು ಕಾಂತಾರ ಸಿನಿಮಾವನ್ನು ವೀಕ್ಷಿಸಿದ ಬಳಿಕ ಕ್ಲೈಮ್ಯಾಕ್ಸ್‌ ದೃಶ್ಯದ ಫೋಟೊವೊಂದನ್ನು ತಮ್ಮ ಅಧಿಕೃತ ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊಳ್ಳುವುದರ ಮೂಲಕ ಕಾಂತಾರ ಚಿತ್ರದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

‘ನಾನು ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಿಸಿದೆ. OMG! ಎಂತಹ ನಿರೂಪಣೆ, ಭಾವನೆ, ವೈಬ್ ಮತ್ತು ಪ್ರಪಂಚ. ಕ್ಲೈಮ್ಯಾಕ್ಸ್ ರೋಮಾಂಚನಗೊಳಿಸಿತ್ತು. ಇದು ಸಿನಿಮಾದ ಪವರ್. ಪ್ರೇಕ್ಷಕನನ್ನು ಬೇರೊಂದು ಜಗತ್ತಿಗೆ ಕೊಂಡೊಯ್ಯುತ್ತದೆ. ನಾನು ಹುಟ್ಟಿ ಬೆಳೆದಂತಹ ಪ್ರಪಂಚಕ್ಕೆ (ಕರಾವಳಿ)ಗೆ ಕೊಂಡೊಯ್ಯುವ ಸಿನಿಮಾʼʼ ಎಂದು ಹೊಗಳಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *