Breaking News

ಕಲ್ಯಾಣ ಕರ್ನಾಟಕದ‌ ಅಭಿವೃದ್ದಿಗೆ 5 ಸಾವಿರಕೋಟಿ ರೂ ನೀಡಲಾಗುವುದು : ಸಿಎಂ


ಬೀದರ್ :ಕಲ್ಯಾಣ ಕರ್ನಾಟಕದ‌ ಅಭಿವೃದ್ದಿಗೆ ಮುಂದಿನ ಬಜೆಟ್ನಲ್ಲಿ 5 ಸಾವಿರಕೋಟಿ ರೂ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ .

ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡಲಿದ್ದೇನೆ, ನಾವು ಅಧಿಕಾರಕ್ಕೆ ಬಂದ ಮೇಲೆ ಗರಿಷ್ಟ 3 ಸಾವಿರ ಕೋಟಿ ನೀಡಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾವು ಆಡಳಿತ ನಡೆಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಕ್ಕಿಳಿಸಿ ಬಿಜೆಪಿಯನ್ನು ಆಯ್ಕೆ ಮಾಡಿದ್ದೀರಿ. ಕಾಂಗ್ರೆಸ್ ಏನು ಮಾಡಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಭ್ರಷ್ಟಾಚಾರ‍ದ ದಾಖಲೆಗಳನ್ನು ರಾಹುಲ್ ಗಾಂಧಿಗೆ ರವಾನಿಸುತ್ತೇನೆ ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸವಾಲ್ ಹಾಕಿದ್ದಾರೆ.

.ಕಾಂಗ್ರೆಸ್ ಭ್ರಷ್ಟಾಚಾರ‍ದ ದಾಖಲೆಗಳನ್ನು ರಾಹುಲ್ ಗಾಂಧಿಗೆ ರವಾನಿಸುತ್ತೇನೆ. ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸವಾಲ್ ಹಾಕಿದ್ದಾರೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *