Breaking News

ಬಿಜೆಪಿ ಸರ್ಕಾರ ಸುಳ್ಳು ಭರವಸೆ ನೀಡುವುದರಲ್ಲಿ ನಿಸ್ಸೀಮರು : ಸಿದ್ದರಾಮಯ್ಯ


ಬೆಂಗಳೂರು: ಸುಳ್ಳು ಭರವಸೆ ನೀಡುವುದರಲ್ಲಿ ನಿಸ್ಸೀಮನಾಗಿರುವ ಬಿಜೆಪಿ ಸರ್ಕಾರ ಮಳವಳ್ಳಿ ಜಲಕ್ರಾಂತಿಯ ಕಾಮೇಗೌಡ ಅವರ ಪುತ್ರನಿಗೆ ಸರ್ಕಾರಿ ಉದ್ಯೋಗ ಕೊಡುವ ಭರವಸೆಯನ್ನು ಈಡೇರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ನಲ್ಲಿ ಕಾಮೇಗೌಡರ ಜಲಕ್ರಾಂತಿಯನ್ನು ಪ್ರಸ್ತಾಪಿಸಿದ್ದರು. ಬಳಿಕ 2020ರ ಜುಲೈ 2 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಮೇಗೌಡರ ಇಬ್ಬರು ಪುತ್ರರಲ್ಲಿ ಒಬ್ಬರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸರ್ಕಾರಿ ನೌಕರಿ ನೀಡಲು ಸೂಚಿಸಿದ್ದರು. ಇದಾಗಿ ಎರಡು ವರ್ಷ ಕಳೆದು ಕಾಮೇಗೌಡರು ನಿಧನರಾದರೂ ಇವರ ಪುತ್ರನಿಗೆ ಸರ್ಕಾರಿ ನೌಕರಿ ನೀಡಿಲ್ಲ.

ಕಾಮೇಗೌಡ ಅವರು ತಮ್ಮ ಜಮೀನು ಮತ್ತು ಸುತ್ತ ಮುತ್ತಲ ಸ್ಥಳಗಳಲ್ಲಿ 16 ಸಣ್ಣ ಕೆರೆ ಕಟ್ಟೆಗಳನ್ನು ನಿರ್ಮಿಸಿ ಪರಿಸರ ಸೇವೆಯಲ್ಲಿ ಮತ್ತು ರೈತ ಸಮುದಾಯಕ್ಕೆ ನೆರವಾಗುವ ಕಾರ್ಯ ಮಾಡಿದ್ದರು. ಈ ಕಾರ್ಯವನ್ನು ಪ್ರಧಾನಿ ಮೋದಿ ಅವರು ತಮ್ಮ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದು ಸ್ವಾಗತಾರ್ಹ. ಆದರೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಾಮೇಗೌಡರ ಪುತ್ರನಿಗೆ ಸರ್ಕಾರಿ ಕೆಲಸ ಒದಗಿಸಲು ಸಾಧ್ಯವಾಗಿಲ್ಲ. ಇದು ಮನ್ ಕಿ ಬಾತ್ ಮತ್ತು ಸರ್ಕಾರದ ನಕಲಿತನಕ್ಕೆ ಸಾಕ್ಷಿಯಾಗಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *