Breaking News

ಜಿ.ಪಂ ಉಪ ಚುನಾವಣೆ : 3 ಕ್ಷೇತ್ರದಲ್ಲಿ ಬಿಜೆಪಿ ಗೆಲುವು

ಪಣಜಿ: ಗೋವಾದ ಮೂರೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ‍ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾವೋರ್ಲಿಂ, ರೀಸ್‌ ಮೈಗೋಸ್‌ ಹಾಗೂ ಕಾರ್ತಲಿಂ ಕ್ಷೇತ್ರಗಳಿಗೆ ಭಾನುವಾರ ಉಪಚುನಾವಣೆಗಳು ನಡೆದಿದ್ದವು.
ಅವುಗಳ ಫಲಿತಾಂಶವನ್ನು ಘೋಷಿಸಲಾಯಿತು.

ಬಿಜೆಪಿ ಅಭ್ಯರ್ಥಿಗಳಾದ ಪರೇಶ್‌ ನಾಯಕ್‌ , ಸಂದೀಪ್‌ ಕಾಶಿನಾಥ್‌ ಬಂದೋಡ್ಕರ್‌ ಮತ್ತು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಮರ್ಸಿಯಾನಾ ಮೆಂಡೆಸ್ ಇ ವಾಜ್ ಅವರು ಗೆಲುವು ಸಾಧಿಸಿದ ಅಭ್ಯರ್ಥಿಗಳು ಎಂದು ಗೋವಾದ ರಾಜ್ಯ ಚುನಾವಣಾ ಆಯೋಗ ಹೇಳಿದೆ.

ಈ ವರ್ಷ ಫೆಬ್ರುವರಿಯಲ್ಲಿ ಗೋವಾದಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಈ ಮೂರು ಕ್ಷೇತ್ರದ ಅಭ್ಯರ್ಥಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆಸಲಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *