ಚಿತ್ರದುರ್ಗ: ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅದರನ್ವಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು ಜಿಲ್ಲಾ ಕೇಂದ್ರದಲ್ಲಿ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ರಾಜ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 7.30 ಗಂಟೆಗೆ ಕನ್ನಡಾಂಬೆ ಭಾವಚಿತ್ರದ ಮೆರವಣಿಗೆಯು ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಲಿದೆ.
ಮೆರವಣಿಗೆಯಲ್ಲಿ ನಮ್ಮ ನಾಡು, ನುಡಿ, ಸಂಸ್ಕøತಿ ಬಿಂಬಿಸುವ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಇದಕ್ಕೆ ಬೇಕಾದ ತಂಡಗಳನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯವಸ್ಥೆಗೊಳಿಸಬೇಕು. ಇದರ ಜೊತೆಗೆ ಕನ್ನಡ ನಾಡಿನ ವಿಶೇಷತೆ ಬಿಂಬಿಸುವಂತಹ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿದ್ದು, ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು, ಶಾಲಾ ಕಾಲೇಜುಗಳು ಸ್ತಬ್ಧಚಿತ್ರವನ್ನು ತಯಾರಿಸಲು ಆಹ್ವಾನಿಸಲಾಗಿದ್ದು, ಸ್ತಬ್ಧಚಿತ್ರದ ವಿಷಯ ಹಾಗೂ ಪ್ರಸ್ತುತಪಡಿಸುವಿಕೆಗೆ ಜಿಲ್ಲಾಡಳಿತದಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು.
ಮೆರವಣಿಗೆಯು ನೀಲಕಂಠೇಶ್ವರ ದೇವಸ್ಥಾನದಿಂದ ಹೊರಟು, ಪ್ರಮುಖ ರಸ್ತೆ ಮೂಲಕ ರಾಜ್ಯೋತ್ಸವ ಸಮಾರಂಭ ಜರುಗುವ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಿ ಬರಲಿದೆ. ಅಂದು ಬೆಳಿಗ್ಗೆ 09 ಗಂಟೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ನೆರವೇರಲಿದ್ದು, ಶಿಷ್ಠಾಚಾರದನ್ವಯ ಎಲ್ಲ ಗಣ್ಯಮಾನ್ಯರನ್ನು ಆಹ್ವಾನಿಸಲಾಗುವುದು. ಶಾಲಾ ಕಾಲೇಜು ಹಾಗೂ ಹಾಸ್ಟೆಲ್‍ಗಳ ವಿದ್ಯಾರ್ಥಿಗಳಿಂದ ಅಂದು ಬೆಳಿಗ್ಗೆ ಮೈದಾನದಲ್ಲಿ ಹಾಗೂ ಸಂಜೆ ನಗರದ ತ.ರಾ.ಸು. ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ ಸಂಬಂಧ ಡಿಡಿಪಿಐ ಅವರು, ಕಾರ್ಯಕ್ರಮದ ವಿಷಯ ಹಾಗೂ ಪ್ರಸ್ತುತಪಡಿಸುವಿಕೆಯನ್ನು ಪೂರ್ವಭಾವಿಯಾಗಿ ಪರಿಶೀಲಿಸಿ ಬಳಿಕ ಪ್ರದರ್ಶನಕ್ಕೆ ಅನುಮತಿ ನೀಡಬೇಕು ಎಂದು ಸೂಚನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

