ನವದೆಹಲಿ: ಕಾಂಗ್ರೆಸ್ ನೂತನ ಅಧ್ಯಕ್ಷ ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಸ್ಪರ್ಧಿಸಿದ್ದರು .
ಇಂದು ಫಲಿತಾಂಶ ಪ್ರಕಟಗೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬರೋಬ್ಬರಿ 24 ವರ್ಷಗಳ ಬಳಿಕ ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವ ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ನರೇಂದ್ರ ಮೋದಿ ಶುಭಕಕೋರಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜವಾಬ್ದಾರಿ ಹೊತ್ತ ಮಲ್ಲಿಕಾರ್ಜುನ ಖರ್ಗೆಗೆ ಶುಭಾಶಯಗಳು. ಖರ್ಗೆ ಅಧಿಕಾರವದಿ ಫಲಪ್ರದವಾಗಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಹಾರೈಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

