Breaking News

ಅ. 21 ರಂದು 3400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಯೋಜನೆಗೆ ಪ್ರಧಾನಿ ಚಾಲನೆ


ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರದ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರಾಖಂಡ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಯಶಸ್ಸಿಗಾಗಿ ಕೇದರಾನಾಥ, ಬದರೀನಾಥ ದೇಗುಲದಲ್ಲಿ ವಿಶೇಷ ಪ್ರಾರ್ಥನೆ ಮಾಡಲಿದ್ದಾರೆ ಎಂಬ ಸುದ್ದಿಯಿದೆ.

ಜೊತೆಗೆ 3400 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಸಂಪರ್ಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 2022ರ ಅಕ್ಟೋಬರ್ 21 ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ಕೇದಾರನಾಥದಲ್ಲಿ ಬೆಳಗ್ಗೆ 8.30ಕ್ಕೆ ಕೇದಾರನಾಥ ದೇವಸ್ಥಾನದಲ್ಲಿ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಪ್ರಧಾನಮಂತ್ರಿಯವರು ಕೇದಾರನಾಥ ರೋಪ್ ವೇ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ತದನಂತರಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 9.25ಕ್ಕೆ ಪ್ರಧಾನಮಂತ್ರಿಯವರು ಮಂದಾಕಿನಿ ಅಷ್ಟಪಥ ಮತ್ತು ಸರಸ್ವತಿ ಅಷ್ಟಪಥ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *