Breaking News

ಮಂಡ್ಯ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಜಮೀರ್ ಅಹ್ಮದ್ ಖಾನ್ 5 ಲಕ್ಷ ರೂ. ಪರಿಹಾರ ಧನ ವಿತರಣೆ



ಮಂಡ್ಯ: ಕಾಮುಕ ಟ್ಯೂಶನ್ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ ಪಟ್ಟಣದ ಬಾಲಕಿ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ ಶಾಸಕ ಜಮೀರ್ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.

ಬಳಿಕ ಮಾತನಾಡಿದ ಜಮೀರ್ ಖಾನ್, ಕೃತ್ಯ ಎಸಗಿದ ಪಾಪಿಯನ್ನು ಸಾರ್ವಜನಿಕರ ಮುಂದೆ ತುಂಡು ತುಂಡಾಗಿ ಕತ್ತರಿಸಬೇಕು. ಬಾಲಕಿ ಪೋಷಕರ ಗೋಳು ನೋಡಲಾಗುತ್ತಿಲ್ಲ. ಮನುಷ್ಯರು ಯಾರೂ ಈ ಕೃತ್ಯ ಮಾಡಲ್ಲ. ಅವನು ಮನುಷ್ಯಲ್ಲ ರಾಕ್ಷಸನಿಗಿಂತ ಹೆಚ್ಚು. ಈಗ ಕಠಿಣ ಕಾನೂನು ತರದಿದ್ರೆ ಈ ರೀತಿಯ ಘಟನೆ ನಡೆಯುತ್ತಲೇ ಇರುತ್ತದೆ. ಈ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ತರಬೇಕು ಎಂದು ಸರ್ಕಾರಕ್ಕೆ ಜಮೀರ್ ಒತ್ತಾಯಿಸಿದ್ದಾರೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *