Breaking News

ಜೆಡಿಎಸ್‌ ಪಕ್ಷ ಪಂಚರತ್ನ ಕಾರ್ಯಕ್ರಮದ ಮೂಲಕ ರಾಜ್ಯದ ಜನತೆಗೆ ತಿಳಿಸಲಿದೆ : ಕುಮಾರಸ್ವಾಮಿ

ಮೈಸೂರು: ದೇಶದಲ್ಲೇ ಒಂದು ಚುನಾಯಿತ ಸರಕಾರ ಯಾವ ರೀತಿ ಕಾರ್ಯಕ್ರಮಗಳನ್ನು ಕೊಡಬಹುದು ಎಂಬುದನ್ನು ಜೆಡಿಎಸ್‌ ಪಕ್ಷ ಪಂಚರತ್ನ ಕಾರ್ಯಕ್ರಮದ ಮೂಲಕ ರಾಜ್ಯದ ಜನತೆಗೆ ತಿಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್​​ನಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಜೆಡಿಎಸ್ ಸಮಾಲೋಚನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ, ಪಂಚರತ್ನ ರಥಯಾತ್ರೆಯ ಸಿಡಿ ಬಿಡುಗಡೆ ಮಾಡಿದರು.

‘ಉಚಿತ ಶಿಕ್ಷಣ, ಉಚಿತ ಆರೋಗ್ಯ, ಪ್ರತಿ ಕುಟುಂಬಕ್ಕೆ ಉದ್ಯೋಗ, ವಸತಿ ಸೌಲಭ್ಯವನ್ನು ಒದಗಿಸಿಕೊಡುವುದು ಪಂಚರತ್ನ ಯೋಜನೆಯ ಉದ್ದೇಶಗಳಾಗಿವೆ’ ಎಂದರು. ಇತ್ತೀಚಿನ ದಿನಗಳಲ್ಲಿ ಮಳೆ ಅನಾಹುತಗಳು, ಬೆಲೆಕುಸಿತದಿಂದ ಕಂಗಾಲಾಗಿರುವ ರೈತರ ಬದುಕಿಗೆ ನೆರವಾಗುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ಜೊತೆಗೆ ಪ್ರತಿಕುಟುಂಬಕ್ಕೆ ಉದ್ಯೋಗ ಯೋಜನೆಯಲ್ಲಿ ಸರಕಾರಿ ಕೆಲಸವೇ ಎಂದು ಏನಿಲ್ಲ, ಸ್ವಂತ ಉದ್ಯೋಗ ಮಾಡಲು ಸರಕಾರದಿಂದಲೇ ಯುವಕರಿಗೆ ಆರ್ಥಿಕ ಬಲ ತುಂಬಲಿದ್ದೇವೆ. ಕೊನೆಯದಾಗಿ ಪ್ರತಿಕುಟುಂಬಕ್ಕೆ ವಸತಿ ಸೌಲಭ್ಯವನ್ನು ಒದಗಿಸಿಕೊಡುವುದು ನಮ್ಮ ಪಂಚರತ್ನ ಈ ಪಂಚರತ್ನ ಯೋಜನೆಗಳನ್ನು ಮುಂದಿನ ಆರು ತಿಂಗಳ ಕಾಲ ರಾಜ್ಯದ ಪ್ರತಿ ಮನೆಮನೆಗಳಿಗೆ ತಲುಪಿಸುವ ಉದ್ದೇಶವನ್ನು ಪಂಚರತ್ನ ರಥಯಾತ್ರೆ ಹೊಂದಿದೆ. ನವೆಂಬರ್ 1 ರಿಂದ (ಕನ್ನಡ ರಾಜ್ಯೋತ್ಸವ ದಿನ) ರಥಯಾತ್ರೆಗೆ ಚಾಲನೆ ನೀಡಲಿದ್ದೇವೆ. ಕೋಲಾರದ ಮುಳಬಾಗಿಲಿನ ಗಣೇಶ ಮತ್ತು ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ದೇವರ ಅನುಗ್ರಹ ಪಡೆದು ರಥಯಾತ್ರೆ ಪ್ರಾರಂಭಿಸಲಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *