Breaking News

ಮಹಿಳೆಯನ್ನು ಹತ್ಯೆಗೈದಿದ್ದ ಆರೋಪಿ ಜೈಲಿನಲ್ಲೇ ನೇಣಿಗೆ ಶರಣು

ಧಾರವಾಡ: ಜಿಲ್ಲಾ ಆಸ್ಪತ್ರೆ ಬಳಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ವಿಚಾರಣಾಧೀನ ಕೈದಿ ಆನಂದ ದುಧನಿ ಧಾರವಾಡದ ಕೇಂದ್ರ ಕಾರಾಗೃಹದಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸವಿತಾ ಕಿತ್ತೂರ ಎಂಬಾಕೆಯನ್ನು ಧಾರವಾಡದ ಸಿವಿಲ್ ಆಸ್ಪತ್ರೆ ಬಳಿ ಮೊನ್ನೆಯಷ್ಟೇ ಆನಂದ ಬರ್ಬರವಾಗಿ ಹತ್ಯೆ ಮಾಡಿದ್ದ.

ಇದಾದ ಮೇಲೆ ಆರೋಪಿ ಆನಂದನನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಆನಂದ ಜೈಲಿನಲ್ಲೇ ಬೆಡ್‌ಶೀಟ್ ಹರಿದು ಅದರಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾರಾಗೃಹಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *