ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್ನಲ್ಲಿರುವ ಎಲ್ಲ ಮಕ್ಕಳ ಆಪ್ತಸಮಾಲೋಚನೆ ನಡೆಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಚಿತ್ರದುರ್ಗದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸೂಚನೆ ನೀಡಿದೆ.
ಕೌನ್ಸೆಲಿಂಗ್ ನಡೆಸಿ ನ 30ರ ಒಳಗೆ ವರದಿ ನೀಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಮಠದ ಹಾಸ್ಟೆಲ್‌ನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 103 ವಿದ್ಯಾರ್ಥಿನಿಯರು ಆಶ್ರಯ ಪಡೆದಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರ 49 ಜನ ವಿದ್ಯಾರ್ಥಿನಿಯರನ್ನು ಮಕ್ಕಳ ರಕ್ಷಣಾ ಘಟಕಗಳ ನೆರವಿನೊಂದಿಗೆ ಆಯಾ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದ್ದು, 54 ವಿದ್ಯಾರ್ಥಿನಿಯರನ್ನು ಪಾಲಕರೊಂದಿಗೆ ಕಳುಹಿಸಿಕೊಡಲಾಯಿತು. ಒಟ್ಟು 11 ಜಿಲ್ಲೆಗಳಲ್ಲಿ ಈ ಮಕ್ಕಳು ಇದ್ದಾರೆ.
ದೂರು ನೀಡಿದ ಮಕ್ಕಳಷ್ಟೇ ಅಲ್ಲದೆ, ಹಾಸ್ಟೆಲ್ನಲ್ಲಿದ್ದ ಎಲ್ಲ ಮಕ್ಕಳನ್ನೂ ಮಾತನಾಡಿಸಬೇಕು. ಆಪ್ತ ಸಮಾಲೋಚನೆಯ ವೇಳೆ ಲೈಂಗಿಕ ದೌರ್ಜನ್ಯದ ಮಾಹಿತಿ ಸಿಕ್ಕರೆ ಹೇಳಿಕೆ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

