Breaking News

ಎಂ.ಬಿ. ಪಾಟೀಲ್​ ಅವರ ಪತ್ನಿಯ ಫೇಸ್‌ಬುಕ್‌ ಖಾತೆ ಹ್ಯಾಕ್


ವಿಜಯಪುರ: ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್​ ಅವರ ಪತ್ನಿಯ ಫೇಸ್‌ಬುಕ್‌ ಖಾತೆ ಹ್ಯಾಕ್‌ ಮಾಡಲಾಗಿದೆ ಎಂದು ಸಿಇಎನ್​(CEN) ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಎಂ.ಬಿ. ಪಾಟೀಲ್ ಅವರ ಪತ್ನಿ ಆಶಾ ಪಾಟೀಲ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕರ್‌ಗಳು ಹ್ಯಾಕ್ ಮಾಡಿ ಅದರಲ್ಲಿ ಬಾಕ್ಸಿಂಗ್ ವಿಡಿಯೋ ಅಪ್ಲೋಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿಜಯಪುರದ ಸಿಇಎನ್​(CEN) ಪೊಲೀಸ್​​ ಠಾಣೆಯಲ್ಲಿ ದೂರು ನೀಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಖಾತೆಯ ಲಾಗ್​ ಇನ್ ಪಾಸ್​​ವರ್ಡ್ ಬದಲಾಯಿಸಿದರೂ ಹ್ಯಾಕರ್ಸ್​​ ಕೃತ್ಯ ಮುಂದುವರಿಸಿದ್ದಾರೆ ಎಂದು ದೂರಿನಲ್ಲಿ ತಿಳಸಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *