ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು ಮಾರ್ಚ್ 2023ರಲ್ಲಿ ನಡೆಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 10-03-2023ರಿಂದ 29-03-2023ರವರೆಗೆ ನಡೆಸಲು ತೀರ್ಮಾನಿಸಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದೆ.
ಹೀಗಿದೆ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ
ದಿನಾಂಕ 10-03-2023 – ಕನ್ನಡ, ಅರೇಬಿಕ್
ದಿನಾಂಕ 11-03-2023 – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ದಿನಾಂಕ 13-03-2023 – ಅರ್ಥಶಾಸ್ತ್ರ
ದಿನಾಂಕ 14-03-2023– ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
ದಿನಾಂಕ 15-03-2023 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ದಿನಾಂಕ 16-03-2023 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ದಿನಾಂಕ 17-03-2023 – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ದಿನಾಂಕ 18-03-2023 – ಭೂಗೋಳಶಾಸ್ತ್ರ, ಜೀವಶಾಸ್ತ್ರ
ದಿನಾಂಕ 20-03-2023 – ಇತಿಹಾಸ, ಭೌತಶಾಸ್ತ್ರ
ದಿನಾಂಕ 21-03-2023 – ಹಿಂದಿ
ದಿನಾಂಕ 23-03-2023 – ಇಂಗ್ಲೀಷ್
ದಿನಾಂಕ 25-03-2023 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ 27-03-2023 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 29-03-2023 – ಸಮಾಜ ಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
bigtvnews | Hubli Dharwad News | Kannada News | Karnataka News Hubli News | News In Hubli | Local news

