Breaking News

ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ಜೀವಾವಧಿ ಶಿಕ್ಷೆಮ


ಮಂಗಳೂರು; 2015ರಲ್ಲಿ ನಡೆದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಗೆ ಮಂಗಳೂರು ಜಿಲ್ಲಾ ಹೆಚ್ಚುವರಿ ಹಾಗೂ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಬಜ್ಪೆಯ ಸಿದ್ಧಾರ್ಥನಗರದ ನಿವಾಸಿ ಪ್ರವೀಣ್‌ ಸಲ್ಯಾನ್‌ ಶಿಕ್ಷೆಗೊಳಗಾದ ಅಪರಾಧಿ.

ಈತ 2015ರಲ್ಲಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಹಿನ್ನೆಲೆಯಲ್ಲಿ ಆ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು.

ಅಪರಾಧಿ ಜಿಲ್ಲಾ ಸಶಸ್ತ್ರ ಮೀಸಲುಪಡೆಯಲ್ಲಿ ಕಾನ್ಸ್‌ಟೇಬಲ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ. ಫೇಸ್‌ಬುಕ್‌ ಮೂಲಕ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಆತ, ಪ್ರೀತಿಸುವುದಾಗಿ ನಂಬಿಸಿ ಅಶ್ಲೀಲವಾಗಿ ಸಂಭಾಷಣೆ ನಡೆಸುತ್ತಿದ್ದ. ನಂತರ ಆಕೆಯ ಮುಗ್ಧತೆಯನ್ನೇ ಬಂಡವಾಳ ಮಾಡಿಕೊಂಡು ಒಂದು ಲಕ್ಷ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದ. ಇದರಿಂದ ನೊಂದಿದ್ದ ಬಾಲಕಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *