Breaking News

ರಾಗಾ ಜೊತೆ ಹೆಜ್ಜೆ ಹಾಕಿದ ಸ್ಯಾಂಡಲ್ ವುಡ್ ನಟಿ


ರಾಯಚೂರು: ಸ್ಯಾಂಡಲ್ ವುಡ್ ಮತ್ತು ರಾಜಕಾರಣದಿಂದ ದೂರ ಸರಿದಿದ್ದ ಮೋಹಕ ತಾರೆ ರಮ್ಯಾ ಮತ್ತೆ ಸುದ್ದಿ ಮಾಡುತ್ತಿದ್ದಾರೆ. ಇತ್ತೀಚಿಗೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಹಾಜರ್ ಆಗಿದ್ದ ರಮ್ಯಾ, ಇದೀಗ ರಾಜಕೀಯದಲ್ಲೂ ಶೈನ್ ಆಗುತ್ತಿದ್ದಾರೆ.

ನಟಿ ರಮ್ಯಾ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ರಾಯಚೂರಿನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಮ್ಯಾ ಹೆಜ್ಜೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ರಾಜ್ಯದಲ್ಲಿ ಇಂದು ಕೊನೆಯಾಗಲಿದೆ. ಅಂತಿಮ ದಿನ ಈ ಯಾತ್ರೆಯು ರಾಯಚೂರಿನಲ್ಲಿ ಸಖತ್ ಸದ್ದು ಮಾಡಿತ್ತು. ಅದಕ್ಕೆ ಕಾರಣವಾಗಿದ್ದೇ ಮೋಹಕ ತಾರೆ ರಮ್ಯಾ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *