Breaking News

ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಜಿ.ಆರ್.ಜೆ ಅಧಿಕಾರ‌ ಸ್ವೀಕಾರಚಿತ

ಚಿತ್ರದುರ್ಗ: ನಗರದ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಜಿ.ಆರ್.ಜೆ. ಶನಿವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ಕವಿತಾ ಎಸ್. ಮನ್ನಿಕೇರಿ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ದಿವ್ಯ ಪ್ರಭು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿರುವುದರಿಂದ, ದಿವ್ಯ ಪ್ರಭು ಅವರು ಶನಿವಾರ ಅಧಿಕಾರ ವಹಿಸಿಕೊಂಡರು.

ನೂತನ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. 2014 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ದಿವ್ಯ ಪ್ರಭು ಅವರು ಚಿತ್ರದುರ್ಗ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಉಪವಿಭಾಗಾಧಿಕಾರಿ ಚಂದ್ರಯ್ಯ ಸೇರಿದಂತೆ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *