ಬೆಂಗಳೂರು: ವಹಿವಾಟು ಸಮಯ ಮೀರಿ ತಡರಾತ್ರಿಯವರೆಗೂ ತೆರೆದಿದ್ದ ಬಾರ್ ಆಯಂಡ್ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆ.ಆರ್. ಪುರ ಇನ್‌ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.ಪುರ ಇನ್‌ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಟಾನಿಕ್ ಬಾರ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರು, ದಾಳಿ ಮಾಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು.
‘ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆಯವರೆಗೆ ವಹಿವಾಟು ನಡೆಸಲು ಅವಕಾಶವಿದೆ. ಆದರೆ, ಟಾನಿಕ್ ಬಾರ್ ಆಯಂಡ್ ರೆಸ್ಟೋರೆಂಟ್ ನಿತ್ಯವೂ ತಡರಾತ್ರಿಯವರೆಗೂ ವಹಿವಾಟು ನಡೆಸುತ್ತಿತ್ತು. ಇದು ಗೊತ್ತಿದ್ದರೂ ನಂದೀಶ್ ಕ್ರಮ ಕೈಗೊಂಡಿರಲಿಲ್ಲ’ ಎಂಬುದಾಗಿ ಸಿಸಿಬಿ ಪೊಲೀಸರು, ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

