Breaking News

ದೀಪಾವಳಿ ಹಬ್ಬಕ್ಕೆ ಹೊರಟ ಜನ ಸ್ಮಶಾನ ಸೇರಿದರು


ಮಧ್ಯಪ್ರದೇಶ:  ರೇವಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 14 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು 14 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನಿಂದ ಗೋರಖ್‌ಪುರಕ್ಕೆ ಬಸ್ ತೆರಳುತ್ತಿತ್ತು. ಪ್ರಯಾಣಿಕರು ದೀಪಾವಳಿ ಆಚರಿಸಲು ತಮ್ಮ ಊರುಗಳಿಗೆ ತೆರಳುತ್ತಿದ್ದರು.

ಅಪಘಾತ ಆದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಜಖಂಗೊಂಡ ಬಸ್‌ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *