Breaking News

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮೂಹರ್ತ ಫಿಕ್ಸ್


ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಸನ್ನಿಹಿತವಾಗಿದ್ದು, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೀಪಾವಳಿ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ.

ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ವಿಚಾರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಮತ್ತೆ ಚಿಗುರೊಡೆದಿದ್ದು, ಲಾಭಿ ಆರಂಭವಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *