Breaking News

ಇಂದಿನಿಂದ 2 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ


ಬೆಂಗಳೂರು : ಕರ್ನಾಟಕದಲ್ಲಿ ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದ್ದರೂ ಇನ್ನೂ ಮಳೆ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಇಂದಿನಿಂದ 2 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗಬಹುದು.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಮಳೆಯ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್​​ 24ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಭಾರೀ ಮಳೆಯಾಗಿದ್ದರಿಂದ ರಾಜಕಾಲುವೆ, ತಗ್ಗು ಪ್ರದೇಶಕ್ಕೆ ನೀರು ತುಂಬಿಕೊಂಡಿತ್ತು. ಹಾಗಾಗಿ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *