Breaking News

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ


ಬೆಳಗಾವಿ: ಏಳು ವರ್ಷದ ಬಾಲಕ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಬಸಪ್ಪ ಕೊಲಕಾರ್ ಮೃತಪಟ್ಟಿರುವ ಬಾಲಕ. ಮೃತ ಬಾಲಕನು ಬೆಳಿಗ್ಗೆ ಮನೆ ಹೊರಗಡೆ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಮರಕ್ಕೆ ಮುಟ್ಟಿದ್ದರಿಂದ ಈ ಅವಘಡ ಸಂಭವಿಸಿದೆ. ಇನ್ನು ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮನಕರಗುವಂತಿದೆ. ಇನ್ನು ಗ್ರಾಮಸ್ಥರು, ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ತಂತಿಯನ್ನು ಕಂಬದ ಬದಲು ಮರಕ್ಕೆ ಹಾಕಿ, ವಿದ್ಯುತ್ ಸಂಪರ್ಕ ನೀಡಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೆಸ್ಕಾಂ ನಿರ್ಲಕ್ಷ್ಯಕ್ಕೆ ಒಂದೇ ತಿಂಗಳಲ್ಲಿ ಮೂವರ ಸಾವುಗಳು ಸಂಭವಿಸಿವೆ. ಸದ್ಯ ಘಟನಾ ಸ್ಥಳಕ್ಕೆ ಖಾನಾಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *