ಚಿತ್ರದುರ್ಗ :ಅಕ್ಟೋಬರ್ 21ರಂದು ಈ ಚಿತ್ರ ಬಿಡುಗಡೆ ಆಯಿತು. ಜನರಿಂದ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ. ಅದರ ಜೊತೆಗೆ ವಿವಾದವೂ ಹುಟ್ಟಿಕೊಂಡಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಡಾನ್ ಜಯರಾಜ್ ಪಾತ್ರದಲ್ಲಿ ಧನಂಜಯ್ ಮಿಂಚಿದ್ದಾರೆ. ಆದರೆ ವೀರಗಾಸೆ ಕಲಾವಿದರ ಮೇಲೆ ಹಲ್ಲೆ ಮಾಡುವಂತಹ ದೃಶ್ಯಗಳು ಈ ಚಿತ್ರದಲ್ಲಿ ಇವೆ ಎಂಬ ಕಾರಣಕ್ಕೆ ಕೆಲವರು ಈ ಸಿನಿಮಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಕುರಿತಂತೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರಿಂದ ಚಿತ್ರತಂಡಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ.
ಡಾನ್ ಜಯರಾಜ್ ಪಾತ್ರದಲ್ಲಿರುವ ಧನಂಜಯ್ ಅವರಿಂದ ವೀರಗಾಸೆಗೆ ಅವಮಾನ ಆಗಿದೆ. ಇದರಿಂದ ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ಆಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

