Breaking News

ಅ.29ರಂದು ಬೃಹತ್ ಆಕಾಶ ಬುಟ್ಟಿ ಕಾರ್ಯಕ್ರಮ

ಹುಬ್ಬಳ್ಳಿ : ನಗರದ ಮೂರುಸಾವಿರ ಮಠದ ಗಂಗಾಧರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಆಕಾಶ ಬುಟ್ಟಿ ಕಾರ್ಯಕ್ರಮವನ್ನು ಅಕ್ಟೋಬರ್ ೨೯ ರಂದು ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಆಕಾಶ ಬುಟ್ಟಿ ಕಾರ್ಯಕ್ರಮದ ಅಧ್ಯಕ್ಷ ರಾಜು ಜರತಾರಘರ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಬುಟ್ಟಿ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಆಕಾರಗಳ ಆಕಾಶ ಬುಟ್ಟಿಯನ್ನು ತಯಾರಿಸಿ ಬಾನಂಗಳದಲ್ಲಿ ಬಿಟ್ಟ ಆಕಾಶಬುಟ್ಟಿ ಸ್ಪರ್ಧಾಳುಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದ ಅವರು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ವೇಷಭೂಷಣ ಸ್ಪರ್ಧೆ, ಶ್ಲೋಕ್ ಸ್ಪರ್ಧೆ ಹಾಗೂ ಮಕ್ಕಳಿಗಾಗಿ ನೃತ್ಯ ಸ್ಪರ್ಧೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವಿಶೇಷ ಬಹುಮಾನ ನೀಡಲಾಗುವುದು. ಮೊದಲನೇ ಬಹುಮಾನ ೧೫೦೦೦, ದ್ವಿತೀಯ ಬಹುಮಾನ ೧೦೦೦೦ ಹಾಗೂ ತೃತೀಯ ಬಹುಮಾನ ೫೦೦೦. ನಗದು ಇರಲಿದೆ ಎಂದು ಹೇಳಿದರು.

ಇನ್ನೂ ಸಾರ್ವಜನಿಕ ಬಂಧುಗಳಿಗೆ ಉಚಿತ ಕೂಪನ್ ಮುಖಾಂತರ ಲಕ್ಕಿ ಡ್ರಾ ಬಹುಮಾನಗಳು ಇರಲಿದ್ದು, ಎಸ್.ಎಸ್.ಕೆ ಸಮಾಜದ ಬಾಂಧವರು ಹಾಗು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಕಾಶಬುಟ್ಟಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು.

ಆಕಾಶ ಬುಟ್ಟಿ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಅಂದಿನ ಕಾರ್ಯಕ್ರಮಕ್ಕೆ ಮೂರುಸಾವಿರಮಠದ ಶ್ರೀ ಜಗದ್ಗುರು ಗುರುಸಿದ್ಧರಾಜಯೋಗಿಂದ್ರ ಮಹಾಸ್ವಾಮಿಗಳು, ವಿ.ಪ ಪ್ರದೀಪ್ ಶೆಟ್ಟರ್, ಮಹೇಶ ಟೆಂಗಿನಕಾಯಿ, ಹುಢಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಸೇರಿದಂತೆ ಉಪಸ್ಥಿತರಿರಲಿದ್ದಾರೆ ಎಂದರು. ವ

ಪತ್ರಿಕಾಗೋಷ್ಠಿಯಲ್ಲಿ ಹುಢಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ ದಲಬಂಜನ್, ಚಂದ್ರಶೇಖರ್ ಗೋಕಾಕ್ ಉಪಸ್ಥಿತರಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *