Breaking News

ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು


ಮುದ್ದೇಬಿಹಾಳ(ವಿಜಯಪುರ): ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ತಾಲೂಕಿನ ಕುಂಟೋಜಿಯಲ್ಲಿ  ಬೆಳಗಿನ ಜಾವ ನಡೆದಿದೆ.

ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ.

ತೀವ್ರ ಅಸ್ವಸ್ಥಳಾದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟಿದ್ದಾರೆ. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *