Breaking News

ನ.11ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ


ಬೆಂಗಳೂರ: ಬರುವ ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಒಟ್ಟು ನಾಲ್ಕು ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ.

ಅಲ್ಲಿಂದ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳುವ ಅವರು ಮೊದಲಿಗೆ ಅಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ‘ಪ್ರಗತಿಯ ಪ್ರತಿಮೆ’ಯನ್ನು ಅನಾವರಣ ಮಾಡಲಿದ್ದಾರೆ.

ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ನ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಸುಮಾರು 5 ಸಾವಿರ ಕೋಟಿ ರು. ವೆಚ್ಚದಲ್ಲಿ ಈ ಟರ್ಮಿನಲ್‌ ಅನ್ನು ನಿರ್ಮಾಣ ಮಾಡಲಾಗಿದೆ. ವರ್ಷಕ್ಕೆ 2.5 ಕೋಟಿ ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯವನ್ನು ಇದು ಹೊಂದಿದೆ. ಉದ್ಯಾನವನದ ವಿನ್ಯಾಸವನ್ನು ಈ ಟರ್ಮಿನಲ್‌ ಹೊಂದಿದ್ದು ರಾಮಾಯಣ, ಮಹಾಭಾರತ ಕಾಲದ ಸಸ್ಯಗಳನ್ನು ಗುರುತಿಸಿ ನೆಡಲಾಗಿದೆ. ನೀರಿನ ಮರುಬಳಕೆ, ವಿದ್ಯುತ್‌ ಬಳಕೆಯಲ್ಲಿ ಸುಸ್ಥಿರತೆಯನ್ನು ಹೊಂದಿರುವ ಟರ್ಮಿನಲ್‌ ಇದಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *