Breaking News

ಕೇವಲ ಹರ್ಷ ಸಹೋದರಿ ಅಶ್ವಿ‌ನಿ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಶಿವಮೊಗ್ಗಕ್ಕೆ ರಕ್ಷಣೆ ನೀಡಲು ಇಲಾಖೆ ಸಿದ್ಧವಿದೆ : ಎಸ್ಪಿ

ಶಿವಮೊಗ್ಗ: ಕೆಲವು ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಕುಟುಂಬದ ಸದಸ್ಯರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗಿದೆ.

ಆದರೆ ಈವರೆಗೆ ಬೆದರಿಕೆ ಹಾಕಿರುವುದಕ್ಕೆ ಪೂರಕವಾದ ಅಂಶಗಳು ಕಂಡುಬಂದಿಲ್ಲ ಎಂದು ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇವಲ ಹರ್ಷ ಸಹೋದರಿ ಅಶ್ವಿ‌ನಿ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಶಿವಮೊಗ್ಗಕ್ಕೆ ರಕ್ಷಣೆ ನೀಡಲು ಇಲಾಖೆ ಸಿದ್ಧವಿದೆ. ಘಟನೆ ಕುರಿತು ದೊಡ್ಡಪೇಟೆ ಠಾಣೆ ಪೊಲೀಸರ ಮೇಲೆ ಯಾವುದೇ ಒತ್ತಡ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕಾಲಿಗೆ ಗುಂಡು ಇಲ್ಲಿನ ವೆಂಕಟೇಶ ನಗರದ ವಿಜಯ್‌ ಎಂಬುವವರ ಕೊಲೆಗೆ ಸಂಬಂಧಿಸಿ ಎ1 ಆರೋಪಿ ಜಬಿ (23) ಮಹಜರ್‌ಗೆ ಹೋದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದೂ ಎಸ್ಪಿ ತಿಳಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *