Breaking News

ಸರ್ಕಾರಿ ಶಾಲೆಗೆ ಹೊಸ ರೂಪ: ಬಣ್ಣದರ್ಪಣೆಗೆ ಕೇಂದ್ರ ಸಚಿವರ ಚಿಂತನೆ

ಹುಬ್ಬಳ್ಳಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು‌ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ನಮಗೆ ಪ್ರೇರಣೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಹೊಸ ರೂಪ ನೀಡಲು ಬಣ್ಣದರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನಾಳೆ ಕುಂದಗೋಳದ ಹರಭಟ ಶಾಲೆ ಮೈದಾನದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರಿ ಶಾಲಾ, ಕಾಲೇಜುಗಳಿಗೆ ಬಣ್ಣದರ್ಪಣೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದು, ಕೆಲವರು ಶಾಲೆ ಹಾಳಾಗಿದೆ ಅಂತ. ಕೆಲವರು ಶಾಲೆ ಕೆಟ್ಟಿದೆ ಅಂತಾ ಬರುತ್ತಿದ್ದಾರೆ. ಇಂತಹ ಶಾಲೆಗಳಿಗೆ ಹೊಸ ಸ್ವರೂಪ ನೀಡಲು ಹೊಸ ಯೋಜನೆ ರೂಪಿಸಲಾಗುತ್ತಿದೆ. ಒಟ್ಟು ಧಾರವಾಡ ಜಿಲ್ಲೆಯಲ್ಲಿ 1,177 ಶಾಲೆಗಳಿಗೆ ಬಣ್ಣ ನೀಡಲಾಗುತ್ತದೆ. ನಮ್ಮ ಸರ್ಕಾರಿ ಶಾಲಾ ಕಾಲೇಜುಗಳು ಯಾವುದೇ ರೀತಿ ಸುಣ್ಣ ಬಣ್ಣ ಕಳೆದುಕೊಂಡು ಕಳೆಗುಂದಬಾರದು ಈ ಹಿನ್ನೆಲೆಯಲ್ಲಿ ಬಣ್ಣದರ್ಪಣೆ ಮಾಡಲಾಗುತ್ತದೆ ಎಂದರು.

ಸರ್ಕಾರಿ ಶಾಲೆಗಳಿಗೆ ಹೊಸ ಮೆರಗು ಕೊಡಬೇಕು ಎಂಬ ನಿಟ್ಟಿನಲ್ಲಿ ಹೊಸ ಆಲೋಚನೆ ಮಾಡಿದ್ದು, ಭಾರೀ ಮಳೆ ಮತ್ತು ತೇವಾಂಶದಿಂದ ಬಹುತೇಕ ಸರ್ಕಾರಿ ಶಾಲಾ ಕಾಲೇಜುಗಳ ಗೋಡೆಗಳು ಕಳೆಗುಂದಿವೆ. ಈ ನಿಟ್ಟಿನಲ್ಲಿ ಕ್ಷಮತಾ ಸೇವಾ ಸಂಸ್ಥೆಯಿಂದ ಉಚಿತವಾಗಿ ಬಣ್ಣ ವಿತರಣೆ ಮಾಡಲು ಮುಂದಾಗಿದ್ದು,ಹಳೆಯ ವಿದ್ಯಾರ್ಥಿಗಳು, ದಾನಿಗಳು ಈ ಅಭಿಯಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.

ಆಯಾ ಶಾಲೆಗಳು ಒಂದು ಒಪ್ಪಂದ ಮಾಡಿಕೊಳ್ಳಬೇಕು. ಆಪ್ ಲೈನ್ ನೊಂದಣಿ ಕೂಡ ನಡೆಯುತ್ತಿದ್ದು,ನಾಳೆ ಕುಂದಗೋಳದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. ರಾಜ್ಯಸಭಾ ಸದಸ್ಯ ನಟ ಜಗ್ಗೀಶ ಅವರಿಂದ ಚಾಲನೆ ನೀಡುವ ಮೂಲಕ ಹೊಸ ಅಭಿಯಾನಕ್ಕೆ ಮುನ್ನುಡಿ ಬರೆಯಲಾಗುತ್ತದೆ ಎಂದು ಅವರು ಹೇಳಿದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *