ಹುಬ್ಬಳ್ಳಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಧಾರವಾಡ ಜಿಲ್ಲಾಡಳಿತ ಹಾಗೂ ಎಫ್ಐಸಿಸಿಐ ಸಹಯೋಗದಲ್ಲಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಫ್.ಎಂ.ಸಿ.ಜಿ ಕ್ಲಸ್ಟರ್ ಹುಬ್ಬಳ್ಳಿ ಹಾಗೂ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು.
ಹೌದು.. ಉತ್ತರ ಕರ್ನಾಟಕ ಭಾಗದ ಧಾರವಾಡದ ಮುಮ್ಮಿಗಟ್ಟಿಯಲ್ಲಿ ಎಫ್ಎಂಸಿಜಿ ಕ್ಲಸ್ಟರ್ ಸ್ಥಾಪನೆ ಪ್ರಕ್ರಿಯೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಕರ್ನಾಟಕ ಎಫ್‌ಎಂಸಿಜಿ ಬಳಕೆಯಲ್ಲಿ ಮುಂಚೂಣಿಯಲ್ಲಿದೆ. ಆದರೆ, ಶೇ 15ರಷ್ಟು ಮಾತ್ರ ದಿನಬಳಕೆ ವಸ್ತುಗಳು ಇಲ್ಲಿ ಉತ್ಪಾದನೆಯಾಗುತ್ತಿದೆ. ಈ ನಿಟ್ಟಿನಲ್ಲಿ ಶೇ 85ರಷ್ಟು ವಸ್ತುಗಳನ್ನು ಬೇರೆ ರಾಜ್ಯಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಧಾರವಾಡದಲ್ಲಿ ಕೈಗಾರಿಕೆ ಸ್ಥಾಪಿಸುವ ಕಂಪನಿಗಳು ಐದು ವರ್ಷಗಳಲ್ಲಿ ಎಷ್ಟು ವ್ಯವಹಾರ ನಡೆಸುತ್ತವೋ, ಅಷ್ಟು ಸಬ್ಸಿಡಿ ಪಡೆಯುವ ಮೂಲಕ ಕೈಗಾರಿಕೋದ್ಯಮ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗಿದೆ.
ಇನ್ನೂ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಎಂಟಿಬಿ ನಾಗರಾಜ, ಮುರಗೇಶ ನಿರಾಣಿ, ಹಾಲಪ್ಪ ಆಚಾರ, ಶಂಕರಪಾಟೀಲ ಮುನೇನಕೊಪ್ಪ ಸೇರಿದಂತೆ ಇತರರು ಭಾಗವಹಿಸುವ ಮೂಲಕ ಮಹತ್ವದ ಒಡಂಬಡಿಕೆಗೆ ಸಹಿ ಹಾಕುವ ಮೂಲಕ ಉತ್ತರ ಕರ್ನಾಟಕ ಅಭಿವೃದ್ಧಿಗೆ ಅಡಿಪಾಯ ಹಾಕಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

