ಬೆಂಗಳೂರು: ಕರುನಾಡಿನ ಪ್ರತಿಯೊಬ್ಬರು ಕೂಡ ಅಂದುಕೊಂಡಿರುತ್ತಾರೆ. ಯಾಕೆಂದರೆ ನಮಗ್ಯಾರಿಗೂ ಅಪ್ಪು ನಮ್ಮ ಜೊತೆ ಇಲ್ಲ ಎಂದು ನೆನೆಪಿಸಿಕೊಳ್ಳುವುದಕ್ಕೂ ಇಷ್ಟವಿಲ್ಲ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇನ್ನೂ ನಮ್ಮ ಜೊತೆಯೆ ಇದ್ದಾರೆ. ಅಭಿಮಾನಿಗಳ ಹೃದಯ ಸಿಂಹಾಸನವೇರಿ ಕೂತಿದ್ದಾರೆ. ಕಳೆದ ವರ್ಷ ಈ ದಿನದಂದು ರಾಜ್ಯಕ್ಕೆ ಬರಸಿಡಿಲು ಬಡಿದಿತ್ತು.
ನಮ್ಮ ಪ್ರೀತಿಯ ಪವರ್ ಸ್ಟಾರ್ ಅವರನ್ನು ನಾವು ಕಳೆದುಕೊಂಡಿದ್ದೀವಿ. ಹೃದಯಾಘಾತದಿಂದ ಅಪ್ಪು ಬಾರದ ಲೋಕಕ್ಕೆ ಹೊರಟಿದ್ದರು. ಆ ಕರಾಳ ದಿನ ಮತ್ತೆ ಬಂದಿದೆ. ಇಂದು ಅಪ್ಪು ಅವರ ಮೊದಲ ಪುಣ್ಯ ಸ್ಮರಣೆ. ಇನ್ನೂ ಅಪ್ಪು ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ರಾತ್ರಿಯಿಂದಲೇ ಅಪ್ಪು ಸಮಾಧಿ ಬಳಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನಸಾಗರವೇ ಅಪ್ಪು ಸಮಾಧಿಗೆ ಹರಿದು ಬರ್ತಿದೆ. ಅಪ್ಪು ಸಮಾಧಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿದೆ. ಸಮಾಧಿ ಪೂರ್ತಿ ಹಸಿರು ಶ್ವೇತಾಂಬರಿ ವರ್ಣದ ಹೂಗಳಿಂದ ಸಿಂಗಾರಕೊಂಡಿದೆ. ಇನ್ನೂ ಅಪ್ಪು ಸಮಾಧಿ ಬಳಿ ನಿನ್ನೆ ರಾತ್ರಿಯಿಂದಲೇ 24 ಗಂಟೆಗಳ ಸಂಗೀತ ನಮನ ಕಾರ್ಯಕ್ರಮ ನಡೆಯುತ್ತಿದೆ. ಕರ್ನಾಟಕ ಫಿಲಂ ಮ್ಯೂಸಿಕ್ ಅಸೋಸಿಯೇಷನ್ ವತಿಯಿಂದ ಕಾರ್ಯಕ್ರಮ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

