ಬೆಂಗಳೂರು: ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ, ಇಂದಿಗೂ ಅಪ್ಪು ನಮ್ಮ ನಡುವೆ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಆಗುವುದಿಲ್ಲ. ತಮ್ಮ ಸರಳತೆ ಮತ್ತು ಮಾನವೀಯ ಗುಣಗಳಿಂದಲೇ ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ಅಪ್ಪು ಮನೆ ಮಾಡಿದ್ದಾರೆ.
ಇಂದು ಅಪ್ಪು ಅವರ ಒಂದನೇ ವರ್ಷದ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ರ ನೇತೃತ್ವದಲ್ಲಿ ಬಂದೋಬಸ್ತ್ ನೀಡಲಾಗಿದ್ದು. ನಿನ್ನೆ ರಾತ್ರಿಯಿಂದಲು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಕಂಠೀರವ ಸ್ಟುಡಿಯೋ ಮುಂಭಾಗದಿಂದಲು ಸಹ ಪೊಲೀಸರು ಸರ್ಪಗಾವಲಿನಲ್ಲಿದ್ದು, ಬ್ಯಾರಿಕೇಡ್ಗಳನ್ನು ಅಳವಡಿಸಿರುವ ಮುಖಾಂತರವಾಗಿ ಜನರು ಬರುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಂದು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು, ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವನ್ನು ಪೊಲೀಸರು ವಹಿಸಿದ್ದು. ಓರ್ವ ಡಿಸಿಪಿ, 4 ಎಸಿಪಿ, 12 ಇನ್ಸ್ಪೆಕ್ಟರ್, 20 ಪಿಎಸ್‌ಐ ಹಾಗೂ 500 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

