Breaking News

ಅಪ್ಪು ಮೊದಲ ವರ್ಷದ ಪುಣ್ಯತಿಥಿ : ಪತ್ನಿಯಿಂದ ಚಾಮುಂಡಿ ದೇವಿಗೆ ಪೂಜೆ ಸಲ್ಲಿಕೆ


ಬೆಂಗಳೂರು: ಇಂದು ನಟ ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯತಿಥಿ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಆಗಮಿಸಲಿದ್ದಾರೆ. ಪುನೀತ್ ಸ್ಮಾರಕಕ್ಕೆ ನಮಿಸಿ, ಪುಷ್ಪನಮನ ಸಲ್ಲಿಸಲಿದ್ದಾರೆ. ಪುನೀತ್ ರಾಜಕುಮಾರ್ ಕುಟುಂಬದವರು, ಸಂಬಂಧಿಕರು ಬೆಳಗ್ಗೆ ಅಪುಪ ಸ್ಮಾರಕಕ್ಕೆ ಪೂಜೆ ಸಲ್ಲಿಸಲಿದ್ದಾರೆ.

ಅಭಿಮಾನಿಗಳಿಂದ ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜಿಸಲಾಗಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಫಿಲಂಸ್ ಮ್ಯೂಸಿಕ್ ಅಸೋಸಿಯೇಷನ್ ಮತ್ತು ಚಲನಚಿತ್ರ ನಟ, ನಟಿಯರು ಹಾಗೂ ವಾದ್ಯಗೋಷ್ಠಿ ಕಲಾವಿದರಿಂದ ಸತತ 24 ತಾಸುಗಳ ಸಂಗೀತ ಕಾರ್ಯಕ್ರಮ ನಡೆಯಲಿದೆ. ಕಂಠೀರವ ಸ್ಟುಡಿಯೋದಲ್ಲಿ ಬರೋಬ್ಬರಿ 75 ಕಟೌಟ್​ಗಳನ್ನು ನಿರ್ವಿುಸಲಾಗಿದೆ. ಕಂಠೀರವ ಸ್ಟುಡಿಯೋ ಸುತ್ತಮುತ್ತ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *