ಬೆಂಗಳೂರು-ಕೇಂದ್ರ ಸರಕಾರದ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ವಿವಿಧ ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕೇಂದ್ರದ ಬಿಜೆಪಿ ಸರಕಾರ ಕನ್ನಡಿಗರ ಕತ್ತು ಹಿಚುಕುತ್ತಿದೆ ಹಾಗೂ ಕನ್ನಡಿಗರ ಅನ್ನ ಕಸಿದುಕೊಳ್ಳುತ್ತಿದೆ ಎಂದು ದೂರಿದರು.
ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ @BJP4India ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ. 1/7#ಕೇಂದ್ರ_ಸರಕಾರಿ_ಕೆಲಸ_ಕನ್ನಡಿಗರ_ಹಕ್ಕುpic.twitter.com/Ymg7X0FNcb
bigtvnews | Hubli Dharwad News | Kannada News | Karnataka News Hubli News | News In Hubli | Local news

