ಶಿವಮೊಗ್ಗ: ಬಿಜೆಪಿಯನ್ನ ತೊಲಗಿಸಬೇಕು ಎಂಬುದೇ ಬಿಜೆಪಿಯವರ ಸಂಕಲ್ಪ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಂಕಲ್ಪ ಯಾತ್ರೆಯನ್ನು ಟೀಕಿಸಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಈ ಸಂಕಲ್ಪ ಯಾತ್ರೆಗೆ ಹಣ ನೀಡಿ ಜನರನ್ನು ಕರೆದುಕೊಂಡು ಬಂದಿದ್ದಾರೆ. ಅದಕ್ಕಾಗಿ ಕಾರ್ಯಕ್ರಮದಲ್ಲಿ ಜನರು ಕುಳಿತುಕೊಳ್ಳುತ್ತಿಲ್ಲ. ಬಿಜೆಪಿಯವರು ಅಂದ್ರೆ ಡೋಂಗಿಗಳು, ಸುಳ್ಳು ಹೇಳುವವರು ಎಂದು ವ್ಯಂಗ್ಯವಾಡಿದ್ದಾರೆ.
‘ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಆರ್‌ಎಸ್‍ಎಸ್ ಕಾರ್ಯಕರ್ತರು ಕಾನೂನು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ವಿರೋಧಿಗಳ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡುತ್ತಿದ್ದಾರೆ. ಬಿಜೆಪಿಯವರು ಹೆಣದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇನ್ನು ಮೀಸಲಾತಿ ಬಗ್ಗೆ ಮಾತನಾಡಲು ಶ್ರೀರಾಮುಲುಗೆ ಏನು ಗೊತ್ತಿಲ್ಲ. ಆತನಿಗೆ ಸಂವಿಧಾನವೇ ಗೊತ್ತಿಲ್ಲ. ಆತನೇ ತಾನು ಪೆದ್ದ ಎಂದು ಹೇಳಿಕೊಂಡಿದ್ದಾನೆ ಎಂದು ಟೀಕಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

