ಮಂಡ್ಯ: ಕರುನಾಡ ರತ್ನ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪುಣ್ಯಸ್ಮರಣೆ ದಿನವೇ ಯುವ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಅಪ್ಪು’ ಇಲ್ಲದ ಜೀವನ ಬೇಡವೆಂದು ನೇಣು ಬಿಗಿದುಕೊಂಡು ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ. ಹೊಸ ಆನಂದೂರು ಗ್ರಾಮದ ಕಿರಣ್(22) ಮೃತ ಅಪ್ಪು ಅಭಿಮಾನಿಯಾಗಿದ್ದಾನೆ. ಶನಿವಾರ ಗ್ರಾಮದಲ್ಲಿ ನಡೆದ ಅಪ್ಪು ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕರಿಣ್ ಪೂಜೆ ಸಲ್ಲಿಸಿದ್ದ.
ಅಪ್ಪು ಪುಣ್ಯಸ್ಮರಣೆ ಪ್ರಯುಕ್ತ ಅನ್ನಸಂತರ್ಪಣೆ ಕೂಡ ನಡೆಸಿದ್ದ ಕಿರಣ್ ಕಾರ್ಯಕ್ರಮದ ಬಳಿಕ ಮನೆಗೆ ಬಂದು ‘ಅಪ್ಪು’ಗಾಗಿ ಕಣ್ಣೀರಾಕಿದ್ದ. ಬಳಿಕ ಮನನೊಂದು ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಕೆಆರ್‍ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

