Breaking News

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುತಾಲಿಕ್ ಕಣಕ್ಕಿಳಿಯುವುದು ಖಚಿತ


ಧಾರವಾಡ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯುವುದು ಖಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹಲವು ಕ್ಷೇತ್ರಗಳ ಅಭಿಮಾನಿಗಳು ಮನವಿ ಮಾಡುತ್ತಿದ್ದು, ಡಿಸೆಂಬರ್ ಮೊದಲ ವಾರದ ಹೊತ್ತಿಗೆ ಯಾವ ಕ್ಷೇತ್ರ ಎಂಬುದನ್ನು ಬಹಿರಂಗಪಡಿಸುತ್ತೇನೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.ಮೂಲಗಳ ಪ್ರಕಾರ ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯ ಯಾವುದಾದರು ಒಂದು ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ಪೂರ್ವ ಸಿದ್ಧತೆಗಳು ನಡೆಯುತ್ತಿದೆ ಎಂದು ಹೇಳಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *