Breaking News

ಕೆಲಗೇರಿ ಕೆರೆಗೆ ಕಾಯಕಲ್ಪ : ಮೇಯರ್ ಸೂಚನೆ

ಧಾರವಾಡ: ಸರ್ ಎಂ. ವಿಶ್ವೇಶ್ವರಯ್ಯ ರವರಿಂದ ಸ್ಥಾಪಿತವಾದ ಧಾರವಾಡದ ಕೆಲಗೇರಿ ನಗರದ ನಾಗರಿಕರು ಹಾಗೂ ಸ್ಥಳೀಯ ಪಾಲಿಕೆಯ ಸದಸ್ಯರ ಕೋರಿಕೆಯ ಮೇರೆಗೆ ಇಂದು ಮುಂಜಾನೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ಭೇಟಿ ನೀಡಿ ಕೆಲಗೇರಿ ಕೆರೆಯ ಸ್ವಚ್ಛತೆ ಹಾಗೂ ಅಭಿವೃದ್ಧಿಯ ಕುರಿತು ಪಾಲಿಕೆಯ ಅಧಿಕಾರಿಗಳಿಗೆ ಶೀಘ್ರವೇ ಕ್ರಮ ಕೈಗೊಳ್ಳಲು ಸೂಚಿಸಿದರು.


ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಮಾತನಾಡಿ ಬರುವ ವಾರದಲ್ಲಿ ಕೆರೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅತೀ ಶೀಘ್ರದಲ್ಲಿ ಉದ್ಯಾನವನದಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ನವರ ಮೂರ್ತಿಯನ್ನು ಉದ್ಘಾಟನೆ ಮಾಡಿ ಒಂದು ಮಾದರಿ ಪ್ರವಾಸ ತಾಣವನ್ನಾಗಿ ಮಾಡುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶ್ರೀಮತಿ ಚಂದ್ರಕಲಾ ಕೋಟಬಾಗಿ, ಮಂಜುನಾಥ ಭಟ್ಟೆಣ್ಣವರ , ಸಿ.ಎಸ್. ಪಾಟೀಲ . ಬಸವರಾಜ ಗರಗ , ಶಂಕರ ಕೊಟ್ಯಾನ , ಪಾಲಿಕೆಯ ವಲಯ ಅಧಿಕಾರಿಗಳಾದ ಫಕ್ಕಿರಪ್ಪಾ ಇಂಗಳಗಿ ರವರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *