Breaking News

ಪಂಚರತ್ನ ರಥಯಾತ್ರೆಗೆ ಭರ್ಜರಿ ಸಿದ್ದತೆ


ಕೋಲಾರ : ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರೊ ಜೆಡಿಎಸ್ ಪಕ್ಷ, ನವೆಂಬರ್ 1 ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಲಿದೆ.

ನವೆಂಬರ್ 1 ರಂದು ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಕೆ ನಂತರ, ಮುಳಬಾಗಿಲು ಪಟ್ಟಣ ಹೊರವಲಯದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮುಂದಿನ ವರ್ಷದ ಮಾರ್ಚ್ ವರೆಗು ಪಂಚರತ್ನ ರಥಯಾತ್ರೆ ಸಾಗಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲು ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

ನವೆಂಬರ್ 1 ರಂದು ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕು ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಉಸ್ತುವಾರಿಯನ್ನ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್ ವಹಿಸಿಕೊಂಡಿದ್ದಾರೆ. ಜಿಲ್ಲಾ ಜೆಡಿಎಸ್ ನಾಯಕರ ಜೊತೆಗೂಡಿ ಕಾರ್ಯಕ್ರಮ ಸ್ತಳದಲ್ಲಿ ಸಿದ್ದತೆಗಳನ್ನ ಪರಿಶೀಲನೆ ನಡೆಸಿದ್ರು. ಇದೇ ವೇಳೆ ಮಾತನಾಡಿದ ಸಮೃದ್ದಿ ಮಂಜುನಾಥ್, ನವೆಂಬರ್ 1 ರಂದು ಬೃಹತ್ ವೇದಿಕೆ ಕಾರ್ಯಕ್ರಮ ನಂತರ ಬಟ್ಲಬವನಹಳ್ಳಿ ಗ್ರಾಮದಲ್ಲಿ ಕುಮಾರಸ್ವಾಮಿ ಅವ್ರು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿಸಿದ್ರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *