ಅಹಮದಾಬಾದ್: ಮೊರ್ಬಿ ಕೇಬಲ್ ಸೇತುವೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯದಲ್ಲಿ ಮೃತದೇಹಗಳ ಪತ್ತೆ ಕಾರ್ಯ ನಡೆಯುತ್ತಿದೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅಪಘಾತದ ಮಾಹಿತಿಯ ಮೇರೆಗೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮೊರ್ಬಿಗೆ ಬಂದಿದ್ದಾರೆ. ತಡರಾತ್ರಿ ಮೊರ್ಬಿ ತಲುಪಿ, ಮೊದಲು ಘಟನೆಯ ಸ್ಥಳದಲ್ಲಿದ್ದ ಗಾಯಾಳುಗಳಿಗೆ ಸಾಂತ್ವನ ಹೇಳಿ ನಂತರ ಆಸ್ಪತ್ರೆಗೆ ತೆರಳಿದ್ದಾರೆ.
230 ಮೀಟರ್ ಉದ್ದದ ಈ ಸೇತುವೆಯನ್ನು 19ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿತ್ತು. ನವೀಕರಣ ಕಾರ್ಯ ಕೈಗೆತ್ತಿಕೊಂಡಿದ್ದರಿಂದಾಗಿ 6 ತಿಂಗಳು ಜನರ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಕಳೆದ 5 ದಿನಗಳ ಹಿಂದೆಯಷ್ಟೇ ತೂಗು ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿತ್ತು. ನಿನ್ನೆ ರಜೆ ಇದ್ದ ಕಾರಣ ಸಾಕಷ್ಟು ಸಂಖ್ಯೆಯ ಪ್ರವಾಸಿಗರು ಸೇತುವೆ ಮೇಲೆ ಸೇರಿದ್ದರು. ಭಾರ ತಾಳಲಾರದೆ ತೂಗು ಸೇತುವೆ ಮುರಿದು ಬಿದ್ದಿದೆ. NDRF ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

