ಸುಬ್ರಹ್ಮಣ್ಯ: ಗ್ರಾ.ಪಂ. ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಅವರು ಅ. 29ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಭಾರತಿ ಅವರ ಪತಿ ದೂರು ನೀಡಿದ್ದು ಅ. 29ರ ಅಪರಾಹ್ನ ತನಕ ಕೆಲಸಕ್ಕೆ ಹೋಗಿ ಬಳಿಕ ಮನೆಗೆ ಹೋಗಿ ತಾಯಿ ಸರಸ್ವತಿ ಹಾಗೂ ಅತ್ತೆ ಭವಾನಿ ಅವರ ಚಿಕಿತ್ಸೆಯ ಬಗ್ಗೆ ಕಾಣಿಯೂರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಕೊಡಿಸಿ ವಾಪಸ್ ರಾತ್ರಿ ಮನೆಗೆ ಬಂದ ವೇಳೆ ಪತ್ನಿ ಮನೆಯಲ್ಲಿ ಇರಲಿಲ್ಲ. ಆ ಬಳಿಕ ತಂದೆ ಹಾಗೂ ಮಕ್ಕಳಲ್ಲಿ ವಿಚಾರಿಸಿದಾಗ ಅವರು ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್ ಸ್ವೀಚ್ ಆಫ್ ಆಗಿತ್ತು.
ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಿದಾಗ ಎಲ್ಲಿಯೂ ಸಿಗಲಿಲ್ಲ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

