Breaking News

ನ. 6ರಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಕಾರ್ಯಕ್ರಮ


ಬೆಂಗಳೂರು : ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನ. 6ರಂದು ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲು ಕೆಪಿಸಿಸಿ ನಿರ್ಧರಿಸಿದೆ.

ಕಾರ್ಯಕ್ರಮದ ಸ್ವರೂಪದ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಸೇರಿದಂತೆ ಕಾಂಗ್ರೆಸ್‌ ನಾಯಕರು ಭಾನುವಾರ ಚರ್ಚೆ ನಡೆಸಿದರು.

‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್‌ನಿಂದ ಸ್ಪರ್ಧಿಸಲು ಬಯಸುವವರು ನ. 5ರಿಂದ 15ರ ಒಳಗೆ ಅರ್ಜಿ ಸಲ್ಲಿಸುವಂತೆ ಕೂಡಾ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಹದಾಯಿ ಮತ್ತು ಕೃಷ್ಣಾ ಜಲಾನಯನ ಪ್ರದೇಶ ಅಭಿವೃದ್ಧಿಗೆ ಆಗ್ರಹಿಸಿ ಟ್ರ್ಯಾಕ್ಟರ್‌ ರ‍್ಯಾಲಿ, ಡಿಸೆಂಬರ್‌ನಲ್ಲಿ ಮಂಗಳೂರಿನಲ್ಲಿ ಮೀನುಗಾರರ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *