ಹುಬ್ಬಳ್ಳಿ: ಮುಂಬರುವ 2023 ರ ಚುನಾವಣೆಯಲ್ಲಿ ಸೆಂಟ್ರಲ್ ಕ್ಷೇತ್ರದಿಂದಲೇ ನಾನೇ ಸ್ಪರ್ಧೆ ಮಾಡುವೆ. ಮತ್ತೊಬ್ಬರ ಕಣಕ್ಕೆ ಇಳಸುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಚುನಾವಣೆಯಲ್ಲಿ ಕೂಡಾ ನಾನು ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೇ ನಾನು ರಾಜ್ಯಪಾಲರಾಗಿ ಹೋಗುತ್ತೇನೆಂಬ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಇದೀಗ ಕೂಡಾ ಕೇಳಿ ಬಂದಿದೆ. ಅವೆಲ್ಲವೂ ಊಹಾಪೋಹಗಳು ಬರುವ ಚುನಾವಣೆಯಲ್ಲಿ ನಾನೇ ಸೆಂಟ್ರಲ್ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದು ತಿಳಿಸಿದರು.
ಭ್ರಷ್ಟಾಚಾರ ಕುರಿತಂತೆ ಹಿಂದೆ ಆಡಳಿತ ನಡೆಸಿದ ಸರ್ಕಾರಗಳ ತನಿಖೆಗೆ ಆಗ್ರಹಿಸಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಭ್ರಷ್ಟಾಚಾರ ತನಿಖೆ ಕುರಿತು ಲೋಕಾಯುಕ್ತದಲ್ಲಿ ದೂರು ಸಲ್ಲಿಕೆ ಆಗಿದೆ. ಅದರೊಟ್ಟಿಗೆ ಈ ಹಿಂದಿನ ಸರ್ಕಾರಗಳಲ್ಲಿ ನಡೆದ ಭ್ರಷ್ಟಾಚಾರ ಕುರಿತು ತನಿಖೆಯಾಗಲಿ. ಅಲ್ಲದೇ ಸಿದ್ದರಾಮಯ್ಯ ತಮ್ಮಲ್ಲಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೆ ನೀಡಿ ದೂರು ನೀಡಲಿ. ಅದು ಬಿಟ್ಟು ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಹರಿಹಾಯ್ದರು.
ಹು-ಧಾ ಮಹಾನಗರ ಪಾಲಿಕೆ ಆರ್ಥಿಕ ಎದುರಿಸುವ ಹಿನ್ನೆಲೆಯಲ್ಲಿ ಪಾಲಿಕೆ ಮೇಯರ್ ಪತ್ರ ಬರೆದಿರುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಆದಷ್ಟು ಬೇಗ ಅನುದಾನ ಸಿಗಲಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

