ಬೆಂಗಳೂರು : ವಿಜಯಪುರ ಮಹಾನಗರ ಪಾಲಿಕೆ ಸೇರಿ ರಾಜ್ಯದ 51 ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಒಟ್ಟು 51 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 15, ಜೆಡಿಎಸ್ 2 ಇತರೆ ಪಕ್ಷಗಳು 2 ಹಾಗೂ ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ವಿಜಯಪುರ ಮಹಾನಗರ ಪಾಲಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.ಒಟ್ಟು 35 ಸ್ಥಾನಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 10 ಹಾಗೂ ಜೆಡಿಎಸ್ 1 ಸ್ಥಾನ ಗೆಲುವು ಸಾಧಿಸಿದೆ. ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಪುರಸಭೆಯ ಏಳು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಆರರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ 31 ಸದಸ್ಯ ಬಲದ ನಗರಸಭೆಯಲ್ಲಿ ಅಧಿಕಾರರೂಡ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

