Breaking News

ಭಾರತದ ಉಕ್ಕಿನ ಮನುಷ್ಯ ಖ್ಯಾತೀಯ ಜಮ್ಶೆಡ್ ಜೆ ಇರಾನಿ ನಿಧನ


ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಹಾಗೂ ಇರಾನಿ ಟಾಟಾ ಸ್ಟೀಲ್​ ಸಂಸ್ಥೆಯ ನಿವೃತ್ತ ಮ್ಯಾನೇಜಿಂಗ್​ ಡೈರೆಕ್ಟರ್​ ಜಮ್ಶೆಡ್ ಜೆ ಇರಾನಿ ಅವರು ಸೋಮವಾರ ತಡರಾತ್ರಿ ಜೆಮ್‌ಶೆಡ್‌ಪುರದಲ್ಲಿ ನಿಧನರಾಗಿದ್ದಾರೆ ಎಂದು ಟಾಟಾ ಸ್ಟೀಲ್ ತಿಳಿಸಿದೆ.

ಇರಾನಿಯವರು 2011ರಲ್ಲಿ ಟಾಟಾ ಸ್ಟೀಲ್​ ಮಂಡಳಿಯ ಮ್ಯಾನೇಜಿಂಗ್​ ಡೈರೆಕ್ಟರ್​ ಹುದ್ದೆಯಿಂದ ನಿವೃತ್ತರಾಗಿದ್ದರು. ಟಾಟಾ ಸ್ಟೀಲ್​ ಕಂಪೆನಿಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದ ಜಮ್ಶೆಡ್​ ಇರಾನಿ 43 ವರ್ಷಗಳ ಕಾಲ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದ್ದರು.

1936ರಲ್ಲಿ ಜೂನ್​ 2ರಂದು ನಾಗ್ಪುರದಲ್ಲಿ ಜಿಜಿ ಇರಾನಿ ಮತ್ತು ಖೋರ್ಶೆಡ್ ಇರಾನಿ ದಂಪತಿಗೆ ಜನಿಸಿದ ಇವರು ತಮ್ಮ 86ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *