Breaking News

ಕೆಆರ್‌ಎಸ್ ಪಕ್ಷದಿಂದ 13 ದಿನಗಳ ಕಾಲ ರಾಜ್ಯೋತ್ಸವ ಆಚರಣೆ


ಬೆಂಗಳೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್‌ಎಸ್) ಒಂದು ತಿಂಗಳ ಕಾಲ ಕನ್ನಡೋತ್ಸವದ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

‘ಕೆಆರ್‌ಎಸ್ ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ 13 ದಿನಗಳ ಕಾಲ ರಾಜ್ಯದಾದ್ಯಂತ ಪ್ರವಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕವನ್ನು ಏಕೀಕರಣ ಮಾಡಿದ ಮಹನೀಯರ ಜನ್ಮಭೂಮಿಗೆ ಭೇಟಿ ನೀಡಿ , ಅವರನ್ನು ಸ್ಮರಿಸಿ ಜನಜಾಗೃತಿ ಮೂಡಿಸ ಲಾಗುವುದು’ ಎಂದು ಪಕ್ಷದ ಕಾರ್ಯದರ್ಶಿ ಬಿ.ಎಸ್ ಮಲ್ಲಿಕಾರ್ಜುನ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು

‘ಈ ಯಾತ್ರೆಯ ವೇಳೆಯಲ್ಲಿ ಕನ್ನಡ ಭಾಷೆಯನ್ನು ಬದುಕಿನ ಹಾಗೂ ಜೀವನೋಪಾಯದ ಭಾಷೆ ಮಾಡಿಕೊಳ್ಳುವ ಕುರಿತು ಚರ್ಚೆ, ಸಂವಾದ ಮತ್ತು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ರಾಜ್ಯದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು. ಕನ್ನಡ ಬಾರದ ಅಧಿಕಾರಿಗಳು ಮತ್ತು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ನಾಡಿನ ವಿವಿಧೆಡೆ ಇರುವ ಆರ್ಥಿಕತೆಯ ಸಂಪನ್ಮೂಲಗಳು, ಭವಿಷ್ಯದ ಅವಕಾಶಗಳ ಅನ್ವೇಷಣೆ ಕುರಿತು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *