ಬೆಂಗಳೂರು: ‘ರಾಜ್ಯದಲ್ಲಿ ಮುಂದಿನ ಅವಧಿಗೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ನಂಬಿಕೆಯನ್ನು ಹೂಡಿಕೆದಾರರು ಹೊಂದಿರುವುದರಿಂದಲೇ ದೊಡ್ಡ ಪ್ರಮಾಣದ ಹೂಡಿಕೆ ಹರಿದುಬಂದಿದೆ. ಈ ವಿಶ್ವಾಸ ನಮಗೂ ಇದೆ. ಹೀಗಾಗಿಯೇ 2025ರ ಜನವರಿಗೆ ಮುಂದಿನ ಆವೃತ್ತಿಯ ಜಾಗತಿಕ ಹೂಡಿಕೆದಾರರ ಸಮಾವೇಶವನ್ನೂ ಘೋಷಿಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಂದಿನ ಅವಧಿಗೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದು ನಮ್ಮ ದೃಢ ವಿಶ್ವಾಸ. ನಾವು ಅಧಿಕಾರಕ್ಕೆ ಬಂದು ಈಗ ಒಡಂಬಡಿಕೆ ಮಾಡಿಕೊಂಡಿರುವ ಎಲ್ಲಾ ಯೋಜನೆಗಳಿಗೂ ಅನುಮೋದನೆ ನೀಡಿ ಅನುಷ್ಠಾನಗೊಳಿಸುವುದರ ಜತೆಗೆ ಉದ್ಯಮಿಗಳ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಸುತ್ತೇವೆ’ ಎಂದು ಹೇಳಿದರು.
ಬುಧವಾರ ಉದ್ಘಾಟನೆಗೊಂಡ ‘ಜಾಗತಿಕ ಹೂಡಿಕೆದಾರರ ಸಮಾವೇಶದ’ (ಜಿಮ್-2022) ಮೂಲಕ ಚುನಾವಣಾ ಸಂದೇಶ ರವಾನಿಸಿದ ಅವರು, ‘ಮುಂದಿನ ವರ್ಷದ ಮೇ ತಿಂಗಳಲ್ಲಿ ಚುನಾವಣೆ ಬರಲಿದೆ. ಹೀಗಿದ್ದರೂ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಯಾವ ಧೈರ್ಯದಿಂದ ಮಾಡುತ್ತಿದ್ದೀರಿ ಎಂಬ ಪ್ರಶ್ನೆ ಕೇಳಿ ಬಂತು. ಮುಂದಿನ ಬಾರಿಯೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅದೇ ವಿಶ್ವಾಸದಲ್ಲಿ 2025ರ ಜನವರಿಗೆ ಮುಂದಿನ ಜಾಗತಿಕ ಹೂಡಿಕೆದಾರರ ಸಮಾವೇಶವನ್ನೂ ಘೋಷಿಸುತ್ತಿದ್ದೇನೆ. ಇದು ನಮಗೆ ಇರುವ ವಿಶ್ವಾಸ’ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

